Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:31 - ಪರಿಶುದ್ದ ಬೈಬಲ್‌

31 ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೆ ಅವನ ಜೊತೆಯಲ್ಲಿ ಹೋಗಿದ್ದವರು, “ಆ ಜನರು ನಮಗಿಂತ ಬಲಿಷ್ಠರು! ಅವರ ಮೇಲೆ ಜಯ ಸಾಧಿಸಲು ನಮಗೆ ಶಕ್ತಿ ಸಾಲದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಅವನ ಜೊತೆಯಲ್ಲಿ ಹೋದವರು - ಆ ಜನರು ನಮಗಿಂತ ಬಲಿಷ್ಠರು; ಅವರ ಮೇಲೆ ಹೋಗುವದಕ್ಕೆ ನಮಗೆ ಶಕ್ತಿಸಾಲದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:31
8 ತಿಳಿವುಗಳ ಹೋಲಿಕೆ  

ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


ನನ್ನ ಜೊತೆಯಲ್ಲಿ ಬಂದ ಬೇರೆಯವರು ಭಯವನ್ನುಂಟುಮಾಡುವ ಸಂಗತಿಗಳನ್ನು ಹೇಳಿದರು. ಆದರೆ ಯೆಹೋವನು ಆ ಭೂಮಿಯನ್ನು ನಮಗೆ ಕೊಡುತ್ತಾನೆಂದು ನಾನು ನಿಜವಾಗಿ ನಂಬಿದ್ದೆ.


ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ.


“ಇಸ್ರೇಲ್ ಜನರೇ, ಕೇಳಿರಿ. ಈ ದಿನ ನೀವು ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಪ್ರವೇಶಿಸಿ ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ಹೊಡೆದೋಡಿಸುವಿರಿ. ಅವರ ಪಟ್ಟಣಗಳು ದೊಡ್ಡದಾಗಿವೆ; ಅದರ ಗೋಡೆಗಳು ಆಕಾಶದಷ್ಟು ಎತ್ತರವಾಗಿವೆ;


ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.


ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು.


ಯೆಹೋವನು ಇಸ್ರೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಯಾಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು