Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:33 - ಪರಿಶುದ್ದ ಬೈಬಲ್‌

33 ಪ್ರಚಂಡರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:33
17 ತಿಳಿವುಗಳ ಹೋಲಿಕೆ  

ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.


ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು.


ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು.


(ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)


ಈಜಿಪ್ಟಿನಲ್ಲಿ ಅತ್ಯಂತ ಎತ್ತರವಾಗಿದ್ದ ಮಹಾಸೈನಿಕನೊಬ್ಬನನ್ನು ಬೆನಾಯನು ಕೊಂದುಹಾಕಿದನು. ಅವನು ಏಳೂವರೆ ಅಡಿ ಎತ್ತರವಾಗಿದ್ದನು. ಅವನ ಕೈಯಲ್ಲಿದ್ದ ಈಟಿಯು ದೊಡ್ಡ ಕಂಬದಂತೆ ಇತ್ತು. ಬೆನಾಯನ ಕೈಯಲ್ಲಿ ಒಂದು ದೊಣ್ಣೆಮಾತ್ರ ಇತ್ತು. ಬೆನಾಯನು ಅವನ ಹತ್ತಿರ ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಾಯಿಸಿದನು.


(ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್‌ನಲ್ಲಿ ವಾಸಮಾಡುತ್ತಿದ್ದರು. ಅವರು ಬಲಾಢ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು.


ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.


ಆ ರಾತ್ರಿಯಲ್ಲಿ ಜನರೆಲ್ಲರೂ ಗಟ್ಟಿಯಾಗಿ ಕೂಗಿಕೊಂಡರು.


ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.


ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.


ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.


ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು