Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:11 - ಪರಿಶುದ್ದ ಬೈಬಲ್‌

11 “ಈ ಜನರು ಇನ್ನೆಷ್ಟು ಕಾಲದವರೆಗೆ ನನ್ನನ್ನು ತಿರಸ್ಕರಿಸುವರು? ನಾನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನೆಷ್ಟು ಕಾಲದವರೆಗೆ ನನ್ನನ್ನು ನಂಬದೆ ಇರುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಮೋಶೆಗೆ - ಈ ಜನರು ಇನ್ನು ಎಷ್ಟರ ಮಟ್ಟಿಗೆ ನನ್ನನ್ನು ಅಲಕ್ಷ್ಯಮಾಡುವರೋ; ನಾನು ನಡಿಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:11
29 ತಿಳಿವುಗಳ ಹೋಲಿಕೆ  

ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ.


ಆದರೂ ಅವರು ಪಾಪಮಾಡುತ್ತಾ ಬಂದರು. ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು.


ಯಾಕೆಂದರೆ ಜನರು ಆತನಲ್ಲಿ ಭರವಸೆ ಇಡಲಿಲ್ಲ. ದೇವರು ತಮ್ಮನ್ನು ರಕ್ಷಿಸಬಲ್ಲನೆಂದು ಅವರು ನಂಬಲಿಲ್ಲ.


“ಆದರೂ ನೀವು ಇನ್ನೂ ನಿಮ್ಮ ದೇವರಾದ ಯೆಹೋವನ ಮೇಲೆ ಭರವಸೆ ಇಡಲಿಲ್ಲ.


ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.


ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ. ನನ್ನನ್ನು ತಿರಸ್ಕರಿಸಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ?


ದೇವರ ಸ್ವರವನ್ನು ಕೇಳಿಯೂ ಆತನಿಗೆ ವಿರುದ್ಧರಾದವರು ಯಾರು? ಮೋಶೆಯ ಮೂಲಕ ಈಜಿಪ್ಟಿನಿಂದ ಬಿಡುಗಡೆ ಹೊಂದಿದವರಲ್ಲವೇ?


ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.


ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.


ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿಮ್ಮ ಪೂರ್ವಿಕರು ನನ್ನನ್ನು ಕೋಪಗೊಳಿಸಿದರು. ಆದ್ದರಿಂದ ಅವರನ್ನು ನಾಶಮಾಡಲು ನಾನು ತೀರ್ಮಾನಿಸಿದೆನು. ಮತ್ತು ಈ ತೀರ್ಮಾನವನ್ನು ಬದಲಾಯಿಸುವದೇ ಇಲ್ಲವೆಂದು ನಿರ್ಧರಿಸಿದೆನು.


ಯೆಹೋವನು ನೀವು ಮಾಡಿಕೊಂಡ ಬಸವನನ್ನು ನಿರಾಕರಿಸಿದ್ದಾನೆ. ಸಮಾರ್ಯವೇ, ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರ ವಿರುದ್ಧವಾಗಿ ತುಂಬಾ ಕೋಪಗೊಂಡಿದ್ದೇನೆ.’ ಇಸ್ರೇಲಿನ ಜನರು ಅವರ ಪಾಪಗಳಿಗಾಗಿ ಶಿಕ್ಷಿಸಲ್ಪಡುವರು. ಶಿಲ್ಪಿಯು ಅವರ ವಿಗ್ರಹಗಳನ್ನು ಮಾಡಿದನು. ಅವು ದೇವರಲ್ಲ. ಸಮಾರ್ಯದ ಬಸವನ ವಿಗ್ರಹಗಳು ಚೂರುಚೂರಾಗಿ ಒಡೆಯಲ್ಪಡುವವು.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?


ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.


ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು