ಅರಣ್ಯಕಾಂಡ 14:12 - ಪರಿಶುದ್ದ ಬೈಬಲ್12 ಸರಿ, ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗಲಿ, ನಾನು ಇವರಿಗೆ ವ್ಯಾಧಿಯನ್ನುಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು. ಅಧ್ಯಾಯವನ್ನು ನೋಡಿ |
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.