Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:18 - ಪರಿಶುದ್ದ ಬೈಬಲ್‌

18 ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:18
26 ತಿಳಿವುಗಳ ಹೋಲಿಕೆ  

ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.


ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.


“ಆದ್ದರಿಂದ ಒಡೆಯನೇ, ನೀನು ಹೇಳಿದಂತೆಯೇ ನಿನ್ನ ತಾಳ್ಮೆಯು ದೀರ್ಘವಾಗಿರಲಿ.


ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.


ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರ ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು.


“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.


ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ಯಾಕೆಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.


ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.


‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.


ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು