ಅರಣ್ಯಕಾಂಡ 14:21 - ಪರಿಶುದ್ದ ಬೈಬಲ್21 ಆದಾಗ್ಯೂ ನನ್ನ ಜೀವದಾಣೆ ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದಾಗ್ಯೂ ನನ್ನ ಜೀವದಾಣೆ, ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು. ಅಧ್ಯಾಯವನ್ನು ನೋಡಿ |
ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’