ಅರಣ್ಯಕಾಂಡ 14:22 - ಪರಿಶುದ್ದ ಬೈಬಲ್22 ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ, ಅಧ್ಯಾಯವನ್ನು ನೋಡಿ |