‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.
ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನ್ನು ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನ್ನು ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಆ ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಬಹು ಸುಂದರವಾದ ದೇಶ.
ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.
ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”