Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:29 - ಪರಿಶುದ್ದ ಬೈಬಲ್‌

29 ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿಮ್ಮ ಶವಗಳು ಈ ಮರುಭೂಮಿಯಲ್ಲೇ ಬೀಳುವುವು. ನೀವು ನನಗೆ ವಿರೋಧವಾಗಿ ಗೊಣಗಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ [ಅರಣ್ಯದಲ್ಲೇ ಸಾಯುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:29
13 ತಿಳಿವುಗಳ ಹೋಲಿಕೆ  

ಅವರು ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿ ಪುರುಷನನ್ನು ಲೆಕ್ಕಿಸಿದರು. ಪ್ರತಿಯೊಬ್ಬನೂ ಅವನ ಕುಟುಂಬದೊಡನೆ ಲೆಕ್ಕಿಸಲ್ಪಟ್ಟನು.


ನಲವತ್ತು ವರ್ಷಗಳ ಕಾಲ ದೇವರು ಯಾರ ಮೇಲೆ ಕೋಪಗೊಂಡಿದ್ದನು? ಪಾಪವನ್ನು ಮಾಡಿದವರ ಮೇಲಲ್ಲವೇ? ಅವರೆಲ್ಲರೂ ಮರುಭೂಮಿಯಲ್ಲಿ ಸತ್ತುಹೋದರು.


ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರೇಲರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.


ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.


ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.


ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 6,03,550.


ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.


ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.


ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”


ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಆದ್ದರಿಂದ ಅವರು ಅರಣ್ಯದಲ್ಲಿ ಸಾಯುವುದಾಗಿ ದೇವರು ಪ್ರಮಾಣ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು