Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:3 - ಪರಿಶುದ್ದ ಬೈಬಲ್‌

3 ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವದಕ್ಕೆ ಈ ದೇಶಕ್ಕೆ ಬರಮಾಡುತ್ತಾನೆ; ನಮ್ಮ ಹೆಂಡರೂ ಮಕ್ಕಳೂ ಪರರ ಪಾಲಾಗುವರಲ್ಲಾ; ನಾವು ಐಗುಪ್ತದೇಶಕ್ಕೆ ತಿರಿಗಿ ಹೋಗುವದು ಒಳ್ಳೇದಲ್ಲವೇ ಎಂದು ಹೇಳಿಕೊಳ್ಳುತ್ತಾ ಒಬ್ಬರ ಸಂಗಡಲೊಬ್ಬರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:3
14 ತಿಳಿವುಗಳ ಹೋಲಿಕೆ  

“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆ ಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.


“ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು.


“ನಮಗೆ ಹೋಗಲು ಅಪ್ಪಣೆಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು.


ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.


ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ?


ಜನರು ಮೋಶೆಯ ಸಂಗಡ ವಾದಮಾಡಿ, “ನಮ್ಮ ಸಹೋದರರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತುಹೋಗಿದ್ದರೆ ಎಷ್ಟೋ ಮೇಲಾಗಿತ್ತು.


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ, “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.


ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


‘ಇಲ್ಲ, ನಾವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡುವೆವು. ಅಲ್ಲಿ ನಮಗೆ ಯುದ್ಧದ ಭಯವಿಲ್ಲ. ಯುದ್ಧದ ತುತ್ತೂರಿಗಳ ಶಬ್ಧವು ಕೇಳುವುದಿಲ್ಲ; ಅಲ್ಲಿ ನಮಗೆ ಹಸಿವೆ ಇರುವುದಿಲ್ಲ’ ಎಂದು ನೀವು ಹೇಳಬಹುದು.


“ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಬೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು