Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:34 - ಪರಿಶುದ್ದ ಬೈಬಲ್‌

34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀವು ಆ ದೇಶವನ್ನು ಸಂಚರಿಸಿ ನೋಡಿದ ನಾಲ್ವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ, ನಾಲ್ವತ್ತು ವರುಷ ನಿಮ್ಮ ಪಾಪದ ಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:34
26 ತಿಳಿವುಗಳ ಹೋಲಿಕೆ  

“ಅನಂತರ ನೀನು ನಿನ್ನ ಬಲಗಡೆಯಲ್ಲಿ ನಲವತ್ತು ದಿವಸಗಳ ಕಾಲ ಮಲಗಬೇಕು. ಈ ಸಾರಿ ನೀನು ಯೆಹೂದದ ದೋಷಗಳನ್ನು ನಲವತ್ತು ದಿವಸ ಹೊತ್ತುಕೊಳ್ಳುವೆ. ಒಂದು ದಿವಸವು ಒಂದು ವರ್ಷಕ್ಕೆ ಸಮಾನ. ಯೆಹೂದವು ಎಷ್ಟು ಕಾಲ ಶಿಕ್ಷೆಯನ್ನು ಅನುಭವಿಸಬೇಕೆಂದು ಇದು ತೋರಿಸುವುದು.”


ಜನರು ನಲವತ್ತು ದಿನಗಳವರೆಗೆ ದೇಶವನ್ನು ಸಂಚರಿಸಿ ನೋಡಿ, ತಮ್ಮ ಪಾಳೆಯಕ್ಕೆ ಹಿಂತಿರುಗಿದರು.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.


ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು.


ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು.


ಆತನು ತನ್ನ ಸೇವಕನಾದ ಆಬ್ರಹಾಮನಿಗೆ ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು.


ದೇವರ ಕೃಪಾವಾತ್ಸಲ್ಯವು ಎಂದೆಂದಿಗೂ ನಿಂತುಹೋಯಿತೇ? ಆತನು ನಮ್ಮೊಂದಿಗೆ ಮತ್ತೆಂದೂ ಮಾತಾಡುವುದಿಲ್ಲವೇ?


ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.


“ಯೆಹೋವನಿಗೆ ಸ್ತೋತ್ರ ಮಾಡಿರಿ! ಆತನು ಇಸ್ರೇಲಿನ ತನ್ನ ಜನರಿಗೆ ವಿಶ್ರಾಂತಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ಆತನು ನಮಗೆ ವಿಶ್ರಾಂತಿಯನ್ನು ದಯಪಾಲಿಸಿರುವನು! ಯೆಹೋವನು ತನ್ನ ಸೇವಕನಾದ ಮೋಶೆಯಿಂದ, ಇಸ್ರೇಲಿನ ಜನರಿಗೆ ಅನೇಕ ಒಳ್ಳೆಯ ವಾಗ್ದಾನಗಳನ್ನು ಮಾಡಿದ್ದಾನೆ. ಯೆಹೋವನು ತನ್ನ ವಾಗ್ದಾನಗಳನ್ನೆಲ್ಲ ಈಡೇರಿಸಿರುವನು.


ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.


“ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.)


ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.


ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’


ನೀನು ಮುನ್ನೂರತೊಂಭತ್ತು ದಿವಸಗಳ ತನಕ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳಬೇಕು. ಈ ರೀತಿಯಾಗಿ ಇಸ್ರೇಲರು ಎಷ್ಟು ಕಾಲ ಶಿಕ್ಷೆ ಅನುಭವಿಸುವರೆಂದು ತೋರಿಸುತ್ತೇನೆ. ಆ ಒಂದು ದಿವಸವು ಒಂದು ವರ್ಷದಂತಿರುವುದು.


“ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು.


“ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಆ ಸಮಯದಲ್ಲಿ ನಾವೆಲ್ಲರು ಅರಣ್ಯದಲ್ಲಿ ಸುತ್ತಾಡಿದೆವು. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.


“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು