Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:35 - ಪರಿಶುದ್ದ ಬೈಬಲ್‌

35 “ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಇದು ಯೆಹೋವನೆಂಬ ನಾನೇ ಹೇಳಿದ ಮಾತು; ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಲೇ ಮಾಡುತ್ತೇನೆ; ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:35
10 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಆದರೂ ಅವರಲ್ಲಿ ಅನೇಕರು ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಅವರು ಮರುಭೂಮಿಯಲ್ಲಿ ಕೊಲ್ಲಲ್ಪಟ್ಟರು.


ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.


ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.


ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪೂರ್ವಿಕರನ್ನು ದಂಡಿಸಿದಂತೆ ನಿಮ್ಮನ್ನೂ ದಂಡಿಸುವೆನು.” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು