Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:39 - ಪರಿಶುದ್ದ ಬೈಬಲ್‌

39 ಮೋಶೆಯು ಈ ಎಲ್ಲಾ ಸಂಗತಿಗಳನ್ನು ಇಸ್ರೇಲರಿಗೆಲ್ಲಾ ಹೇಳಲಾಗಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಮೋಶೆ ಸರ್ವೇಶ್ವರನ ಮಾತುಗಳನ್ನೆಲ್ಲಾ ಇಸ್ರಯೇಲರಿಗೆ ತಿಳಿಸಿದನು. ಅವರು ಬಹಳವಾಗಿ ವ್ಯಸನಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಮೋಶೆಯು ಇಸ್ರಾಯೇಲರಿಗೆ ಈ ಮಾತುಗಳನ್ನು ಹೇಳಿದಾಗ, ಜನರು ಬಹಳವಾಗಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:39
8 ತಿಳಿವುಗಳ ಹೋಲಿಕೆ  

ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ನಿಮಗೇ ತಿಳಿದಿರುವಂತೆ, ಆ ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ.


ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.


ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ‘ಯೆಹೋವನು ಹೇಳುವುದೇನೆಂದರೆ: ನನ್ನ ಜೀವದಾಣೆ. ನೀವು ಏನನ್ನು ಹೇಳಿದಿರೋ ಅದನ್ನೇ ನಿಮಗೆ ಮಾಡುತ್ತೇನೆ;


ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನ ಹೊರತು ಉಳಿದ ಹತ್ತು ಮಂದಿ ಸತ್ತರು. ಯೆಹೋವನು ಅವರಿಬ್ಬರನ್ನು ಉಳಿಸಿದನು. ಅವರಿಗೆ ವ್ಯಾಧಿಯು ತಗಲಲಿಲ್ಲ.


ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು