Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:41 - ಪರಿಶುದ್ದ ಬೈಬಲ್‌

41 ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ನೀವು ಯಶಸ್ವಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆದರೆ ಮೋಶೆ ಅವರಿಗೆ, “ಸರ್ವೇಶ್ವರನ ಆಜ್ಞೆಯನ್ನು ಏಕೆ ಮೀರುತ್ತೀರಿ? ಇದು ಕೈಗೂಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆದರೆ ಮೋಶೆ ಅವರಿಗೆ - ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ; ಇದು ಕೈಗೂಡುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:41
7 ತಿಳಿವುಗಳ ಹೋಲಿಕೆ  

ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.


ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’” ಇದು ಯೆಹೋವನ ನುಡಿ.


ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”


ದೇವರ ಉಸಿರು ಅವರನ್ನು ಕೊಲ್ಲುತ್ತದೆ; ಆತನ ಕೋಪದ ಗಾಳಿಯು ಅವರನ್ನು ನಾಶಮಾಡುತ್ತದೆ.


ಅಮಾಲೇಕ್ಯರೂ ಕಾನಾನ್ಯರೂ ಆ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪುಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಮರುಭೂಮಿಗೆ ಮರಳಿ ಪ್ರಯಾಣ ಮಾಡಬೇಕು” ಎಂದು ಹೇಳಿದನು.


ಆದರೆ ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಆ ಜನರಿಗೆ ಬೆಟ್ಟವನ್ನೇರಿ ಯುದ್ಧಮಾಡಬಾರದೆಂದು ಹೇಳು. ಯಾಕೆಂದರೆ ನಾನು ಅವರೊಂದಿಗಿರುವುದಿಲ್ಲ ಮತ್ತು ಅವರ ವೈರಿಗಳು ಅವರನ್ನು ಸೋಲಿಸಿಬಿಡುವರು!’


ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟುಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದೆಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು