Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:42 - ಪರಿಶುದ್ದ ಬೈಬಲ್‌

42 ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ. ನೀವು ಆ ದೇಶಕ್ಕೆ ಹೋಗಬೇಡಿರಿ. ಇಲ್ಲವಾದರೆ, ನಿಮ್ಮ ಶತ್ರುಗಳಿಂದ ಸೋಲಿಸಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸರ್ವೇಶ್ವರ ನಿಮ್ಮ ಸಂಗಡ ಇಲ್ಲ, ಹತ್ತಬೇಡಿ. ನೀವು ಶತ್ರುಗಳ ಮುಂದೆ ನಿಲ್ಲಲಾರಿರಿ, ಬಿದ್ದು ಸತ್ತುಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯೆಹೋವನು ನಿಮ್ಮ ಸಂಗಡ ಇರುವದಿಲ್ಲ; ಹತ್ತಬೇಡಿರಿ; ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:42
9 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಆ ಜನರಿಗೆ ಬೆಟ್ಟವನ್ನೇರಿ ಯುದ್ಧಮಾಡಬಾರದೆಂದು ಹೇಳು. ಯಾಕೆಂದರೆ ನಾನು ಅವರೊಂದಿಗಿರುವುದಿಲ್ಲ ಮತ್ತು ಅವರ ವೈರಿಗಳು ಅವರನ್ನು ಸೋಲಿಸಿಬಿಡುವರು!’


ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.


ಯೆಹೋವನೇ, ಇಸ್ರೇಲರು ವೈರಿಗಳ ಮುಂದೆ ಸೋತು ಹೋಗಿದ್ದಾರಲ್ಲಾ! ಈಗ ನಾನೇನು ಹೇಳಲಿ?


ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.


ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೋ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು