Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:43 - ಪರಿಶುದ್ದ ಬೈಬಲ್‌

43 ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅಲ್ಲಿ ಅಮಾಲೇಕ್ಯರು ಹಾಗೂ ಕಾನಾನ್ಯರು ನಿಮಗೆ ಎದುರಾಗುವರು; ನೀವು ಅವರ ಕತ್ತಿಗೆ ತುತ್ತಾಗುವಿರಿ. ನೀವು ಸರ್ವೇಶ್ವರನ ಮಾತನ್ನು ಅನುಸರಿಸದೆ ಪ್ರತಿಭಟಿಸಿದ್ದೀರಿ. ಕತ್ತಿಗೆ ತುತ್ತಾಗುವಿರಿ. ಈ ಕಾರಣ ಅವರು ನಿಮ್ಮೊಂದಿಗೆ ಇರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:43
14 ತಿಳಿವುಗಳ ಹೋಲಿಕೆ  

ಅಮಾಲೇಕ್ಯರೂ ಕಾನಾನ್ಯರೂ ಆ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪುಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಮರುಭೂಮಿಗೆ ಮರಳಿ ಪ್ರಯಾಣ ಮಾಡಬೇಕು” ಎಂದು ಹೇಳಿದನು.


ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ. ನೀವು ಆ ದೇಶಕ್ಕೆ ಹೋಗಬೇಡಿರಿ. ಇಲ್ಲವಾದರೆ, ನಿಮ್ಮ ಶತ್ರುಗಳಿಂದ ಸೋಲಿಸಲ್ಪಡುವಿರಿ.


ಆದರೆ ಜನರು ಮೋಶೆಯ ಮಾತನ್ನು ನಂಬಲಿಲ್ಲ. ಅವರು ಪರ್ವತಪ್ರದೇಶದ ಕಡೆಗೆ ಹೊರಟರು. ಆದರೆ ಮೋಶೆಯೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯೂ ಜನರೊಂದಿಗೆ ಹೋಗಲಿಲ್ಲ.


ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ನಮ್ಮ ವೈರಿಗಳು ನಮ್ಮನ್ನು ಹಿಂದಟ್ಟುವಂತೆ ಮಾಡಿದೆ. ನಮ್ಮ ವೈರಿಗಳು ನಮ್ಮ ಐಶ್ವರ್ಯವನ್ನು ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು