Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:45 - ಪರಿಶುದ್ದ ಬೈಬಲ್‌

45 ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆ ಮಲೆನಾಡಿನಲ್ಲಿ ವಾಸವಾಗಿದ್ದ ಅಮಾಲೇಕ್ಯರು ಹಾಗೂ ಕಾನಾನ್ಯರು ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಬಂದು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:45
14 ತಿಳಿವುಗಳ ಹೋಲಿಕೆ  

ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.


ಕಾನಾನ್ಯರಾಗಿದ್ದ ಕೆಲವರು ಚೆಫತ್ ಎಂಬ ನಗರದಲ್ಲಿ ವಾಸ ಮಾಡಿಕೊಂಡಿದ್ದರು. ಯೆಹೂದ್ಯರು ಮತ್ತು ಸಿಮೆಯೋನ್ಯರು ಆ ಕಾನಾನ್ಯರ ಮೇಲೆ ಧಾಳಿಮಾಡಿ ಆ ನಗರವನ್ನು ಸಂಪೂರ್ಣವಾಗಿ ನಾಶಮಾಡಿದರು; ಅಲ್ಲದೆ ಆ ನಗರಕ್ಕೆ ಹೊರ್ಮಾ ಎಂದು ಹೆಸರಿಟ್ಟರು.


ಆದರೆ ಅಲ್ಲಿ ವಾಸಿಸುತ್ತಿದ್ದ ಅಮೋರಿಯರು ಹೊರಗೆ ಬಂದು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರ್‌ನಿಂದ ಹೊರ್ಮದ ತನಕ ನಿಮ್ಮನ್ನು ಓಡಿಸಿದರು.


ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು.


ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಹೊರ್ಮದವರಿಗೆ, ಬೋರಾಷಾನಿನವರಿಗೆ, ಅತಾಕಿನವರಿಗೆ


ಫಿಲಿಷ್ಟಿಯರು ಇಸ್ರೇಲರ ಮೇಲೆ ಆಕ್ರಮಣಮಾಡಲು ಸಿದ್ಧರಾದರು. ಹೋರಾಟ ಆರಂಭವಾಯಿತು. ಫಿಲಿಷ್ಟಿಯರು ಇಸ್ರೇಲರನ್ನು ಸೋಲಿಸಿ ಇಸ್ರೇಲಿನ ಸೈನ್ಯದಲ್ಲಿ ನಾಲ್ಕು ಸಾವಿರ ಸೈನಿಕರನ್ನು ಸಂಹರಿಸಿದರು.


ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.


ತಮ್ಮನ್ನು ರಕ್ಷಿಸಿಕೊಳ್ಳಲು ನೀನು ಅವರಿಗೆ ಸಹಾಯ ಮಾಡಿದೆ. ನಿನ್ನ ರಾಜನಿಗಾದರೋ ಯುದ್ಧದಲ್ಲಿ ಗೆಲ್ಲಲು ಸಹಾಯಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು