Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:11 - ಪರಿಶುದ್ದ ಬೈಬಲ್‌

11 ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಯಾವುದನ್ನು ಅರ್ಪಿಸಿದರೂ ಇದನ್ನು ಮಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಕುರಿ, ಆಡು, ಟಗರು, ಹೋರಿ - ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ನೀವು ಈ ಮೇರೆಗೆ ನೈವೇದ್ಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಮೇರೆಗೆ ನೀವು ನೈವೇದ್ಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗೆ ಒಂದು ಹೋರಿ, ಟಗರು, ಕುರಿಮರಿ, ಮೇಕೆ, ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ಈ ಪ್ರಕಾರ ಮಾಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:11
5 ತಿಳಿವುಗಳ ಹೋಲಿಕೆ  

ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.


ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ.


ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಮಾಡಬೇಕು.


ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.


ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು