ಅರಣ್ಯಕಾಂಡ 15:16 - ಪರಿಶುದ್ದ ಬೈಬಲ್16 ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮಗೂ ನಿಮ್ಮಲ್ಲಿ ವಾಸಿಸುವ ವಿದೇಶೀಯನಿಗೂ ಒಂದೇ ವಿಧಿ, ಒಂದೇ ನಿಯಮ ಇರಬೇಕು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮಗೂ ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ಪ್ರಮಾಣವಿಧಿಗಳಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’ ” ಎಂದರು. ಅಧ್ಯಾಯವನ್ನು ನೋಡಿ |
ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.