Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:24 - ಪರಿಶುದ್ದ ಬೈಬಲ್‌

24 ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:24
14 ತಿಳಿವುಗಳ ಹೋಲಿಕೆ  

ಅಧಿಪತಿಯು ತನ್ನ ಪಾಪದ ಕುರಿತು ತಿಳಿದುಕೊಂಡರೆ, ಅಂಗದೋಷವಿಲ್ಲದ ಹೋತವನ್ನು ತರಬೇಕು. ಅದು ಅವನ ಕಾಣಿಕೆಯಾಗಿರುವುದು.


ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಯೆಹೋವನಿಗೆ ಅರ್ಪಿಸಬೇಕು.


“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”


ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ್ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.


ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:


“ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ.


ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.


ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ಆ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು.


ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನಯಜ್ಞವಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು