Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:30 - ಪರಿಶುದ್ದ ಬೈಬಲ್‌

30 “ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:30
30 ತಿಳಿವುಗಳ ಹೋಲಿಕೆ  

ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.


ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.


“ನಾನು ನಿಮ್ಮೊಂದಿಗೆ ಮಾತನಾಡಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ನೀವು ಯೆಹೋವನ ಆಜ್ಞೆಗೆ ವಿಧೇಯರಾಗಲು ಒಪ್ಪಲಿಲ್ಲ. ನೀವು ನಿಮ್ಮ ಸ್ವಂತ ಶಕ್ತಿಯಿಂದ ಜಯ ಹೊಂದುವುದಾಗಿ ಭಾವಿಸಿ ಬೆಟ್ಟಪ್ರದೇಶವನ್ನು ಏರಿದಿರಿ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ಮನುಷ್ಯಕುಮಾರನಿಗೆ ವಿರೋಧವಾಗಿ ಮಾತನಾಡಿದರೂ ಅದಕ್ಕೆ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ ಅದಕ್ಕೆ ಕ್ಷಮಾಪಣೆಯು ಇಹದಲ್ಲಾಗಲಿ ಪರದಲ್ಲಾಗಲಿ ಇಲ್ಲವೇ ಇಲ್ಲ.


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.


ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ!


ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.


ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.


“ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!


“ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.


ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.


ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”’


ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು. ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದ್ದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.


ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.


ಆದ್ದರಿಂದ ನರಪುತ್ರನೇ, ಇಸ್ರೇಲ್ ಜನಾಂಗದವರೊಂದಿಗೆ ಮಾತನಾಡು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನಿಮ್ಮ ಪೂರ್ವಿಕರು ನನಗೆ ಅಪಮಾನ ಮಾಡಿದರು ಮತ್ತು ದ್ರೋಹ ಮಾಡಿದರು.


ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು