Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:38 - ಪರಿಶುದ್ದ ಬೈಬಲ್‌

38 “ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನನ್ನ ಅಪ್ಪಣೆಗಳನ್ನು ಜ್ಞಾಪಕಮಾಡುವುದಕ್ಕೆ ನಿಮಗೆ ಒಂದು ಗುರುತನ್ನು ಕೊಡುತ್ತೇನೆ. ನಿಮ್ಮ ಬಟ್ಟೆಗಳ ಮೂಲೆಯಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕು. ನೀವು ಇವುಗಳನ್ನು ಇಂದಿನಿಂದ ಯಾವಾಗಲೂ ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 “ಇಸ್ರಯೇಲರು ಮತ್ತು ಅವರ ಸಂತತಿಯವರು ತಮ್ಮ ಬಟ್ಟೆಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕೆಂದು ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇಸ್ರಾಯೇಲ್ಯರೂ ಅವರ ಸಂತತಿಯವರೂ ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ನೀನು ಇಸ್ರಾಯೇಲರಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಅವರು ತಮ್ಮ ತಲತಲಾಂತರಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಅಂಚಿನಲ್ಲಿ ಗೊಂಡೆಗಳನ್ನು ಮಾಡಿಕೊಳ್ಳಬೇಕು. ಸೆರಗಿನ ಗೊಂಡೆಗಳ ಮೇಲೆ ನೀಲಿ ದಾರವನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:38
5 ತಿಳಿವುಗಳ ಹೋಲಿಕೆ  

“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.


“ನೂಲಿನಿಂದ ಮಾಡಿದ ಗೊಂಡೆಗಳನ್ನು ನಿಮ್ಮ ನಿಲುವಂಗಿಗಳ ನಾಲ್ಕು ಮೂಲೆಗಳಿಗೆ ಕಟ್ಟಬೇಕು.


ಆ ಸ್ತ್ರೀಯು ಯೇಸುವಿನ ಹಿಂದೆ ಬಂದು ಆತನ ನಿಲುವಂಗಿಯ ಕೆಳಭಾಗವನ್ನು ಮುಟ್ಟಿದಳು. ಆ ಕ್ಷಣವೇ ಆಕೆಯ ರಕ್ತಸ್ರಾವ ನಿಂತುಹೋಯಿತು.


ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು