Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:39 - ಪರಿಶುದ್ದ ಬೈಬಲ್‌

39 ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆ ಗೊಂಡೆಗಳ ಉಪಯೋಗವೇನಂದರೆ - ನೀವು ಅವುಗಳನ್ನು ನೋಡುವಾಗ ಯೆಹೋವನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ನಡಿಸಬೇಕು, ಮತ್ತು ನೀವು ಪೂರ್ವದಲ್ಲಿ ನನಗೆ ದ್ರೋಹಿಗಳಾಗಿ ಮನಸ್ಸಿಗೂ ಕಣ್ಣಿಗೂ ತೋರಿದಂತೆ ದಾರಿತಪ್ಪಿ ನಡೆದ ಪ್ರಕಾರ ಇನ್ನು ನಡೆಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:39
21 ತಿಳಿವುಗಳ ಹೋಲಿಕೆ  

ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.


ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ಸ್ವಂತ ಆಲೋಚನೆಯ ಮೇಲೆ ಭರವಸೆ ಇಡುವವನು ಮೂರ್ಖನಾಗಿದ್ದಾನೆ. ಜ್ಞಾನಮಾರ್ಗದಲ್ಲಿ ನಡೆಯುವವನು ಸುರಕ್ಷಿತನಾಗಿರುವನು.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


ನಾನು ನೀತಿಮಾರ್ಗವನ್ನು ಬಿಟ್ಟುಹೋಗಿದ್ದರೆ, ನನ್ನ ಕಣ್ಣುಗಳು ನನ್ನ ಹೃದಯವನ್ನು ಕೆಟ್ಟದ್ದಕ್ಕೆ ನಡೆಸಿದ್ದರೆ, ನನ್ನ ಕೈಗಳು ಪಾಪದಿಂದ ಕೊಳಕಾಗಿದ್ದರೆ,


“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.


“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”


“ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.


“ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿನಿಯಮಗಳಿಗೆ ವಿಧೇಯರಾಗಿರಿ.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು