ಅರಣ್ಯಕಾಂಡ 15:9 - ಪರಿಶುದ್ದ ಬೈಬಲ್9 ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ನೀವು ‘ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರೆಸಿದ ಒಂಬತ್ತು ಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ತರುವಂಥದು ಹೋರಿಯಾಗುವ ಪಕ್ಷಕ್ಕೆ ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.
ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.
ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.