13 ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
13 ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”
13 ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ?
13 ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?
“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.
ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.
ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.
ಇಸ್ರೇಲರು ಮೋಶೆ ಆರೋನರ ವಿರುದ್ಧ ಗೊಣಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು.
ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.
ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.
ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.
ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಈ ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.
ನೀವು ಒಳ್ಳೆಯ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಬಹುದು. ಆದ್ದರಿಂದ ಬೇರೆ ಕುರಿಗಳು ಮೇಯಬೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಬೇಕಾದಷ್ಟು ಕುಡಿಯಬಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕದಡಿಸುತ್ತೀರಿ.
ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”