Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:14 - ಪರಿಶುದ್ದ ಬೈಬಲ್‌

14 ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲಿ ದ್ರಾಕ್ಷೇತೋಟಗಳನ್ನಾಗಲಿ ಕೊಡಲಿಲ್ಲ! ನೀನು ಈ ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಷ್ಟು ಮಾತ್ರವೇ ಅಲ್ಲ, ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲವಲ್ಲಾ; ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವದಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:14
12 ತಿಳಿವುಗಳ ಹೋಲಿಕೆ  

ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.


ಆದರೆ ಅಮ್ಮೋನಿಯನಾದ ನಾಹಾಷನು, “ನಾನು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕಿದಾಗ ಮಾತ್ರ ನಿಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆಗ ಇಸ್ರೇಲರಿಗೆಲ್ಲಾ ಅವಮಾನವಾಗುವುದು” ಎಂದು ಉತ್ತರಿಸಿದನು.


ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.


ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲಿ ಅಂಜೂರವಾಗಲಿ ದ್ರಾಕ್ಷಿಯಾಗಲಿ ದಾಳಿಂಬೆಯಾಗಲಿ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು.


ಆದರೆ ಏಳನೆಯ ವರ್ಷದಲ್ಲಿ ನಿಮ್ಮ ಭೂಮಿಯನ್ನು ಬೀಳುಬಿಡಿರಿ; ಬೀಜಬಿತ್ತಬೇಡಿರಿ. ಏಳನೆಯ ವರ್ಷ ನೀವು ಏನನ್ನೂ ಬೆಳೆಸಬಾರದು. ನಿಮ್ಮ ಭೂಮಿಯಲ್ಲಿ ಏನಾದರೂ ಬೆಳೆದರೆ ಅದನ್ನು ಬಡವರು ತಿನ್ನಲಿ. ಉಳಿದದ್ದನ್ನು ಪ್ರಾಣಿಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ವಿಷಯದಲ್ಲಿಯೂ ಆಲಿವ್ ಮರಗಳ ತೋಪಿನ ವಿಷಯದಲ್ಲಿಯೂ ಇದೇ ನಿಯಮವನ್ನು ಪಾಲಿಸಬೇಕು.


“ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷಿತೋಟದಲ್ಲಾಗಲಿ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲಿ, ದ್ರಾಕ್ಷಿತೋಟವನ್ನಾಗಲಿ ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು.


ಈಜಿಪ್ಟಿನಲ್ಲಿ ನೀವು ಅನುಭವಿಸುತ್ತಿರುವ ಸಂಕಟಗಳಿಂದ ಬಿಡಿಸಬೇಕೆಂದು ತೀರ್ಮಾನಿಸಿದ್ದೇನೆ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ಸಮೃದ್ಧಿಕರವಾದ ದೇಶಕ್ಕೆ ನಾನು ನಿಮ್ಮನ್ನು ನಡೆಸುವೆನು!’ ಎಂದು ಹೇಳು.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


“ಆರು ವರ್ಷ ನಿಮ್ಮ ಭೂಮಿಯಲ್ಲಿ ಬೀಜಬಿತ್ತಿ ಬೆಳೆಯನ್ನು ಬೆಳೆಯಿರಿ.


ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.


ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು