ಅರಣ್ಯಕಾಂಡ 16:21 - ಪರಿಶುದ್ದ ಬೈಬಲ್21 “ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿ |
ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.