Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:26 - ಪರಿಶುದ್ದ ಬೈಬಲ್‌

26 ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ ಹೊರಟುಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು [ಇಸ್ರಾಯೇಲ್ಯರ] ಸಮೂಹದವರಿಗೆ - ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:26
13 ತಿಳಿವುಗಳ ಹೋಲಿಕೆ  

ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.


ನಂತರ ಪರಲೋಕದಿಂದ ಮತ್ತೊಂದು ಧ್ವನಿಯು ಹೀಗೆ ಹೇಳುವುದು ನನಗೆ ಕೇಳಿತು: “ನನ್ನ ಜನರೇ, ನೀವು ಆ ನಗರದಿಂದ ಹೊರಗೆ ಬಂದುಬಿಡಿ. ಆಗ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗುವುದಿಲ್ಲ; ಅವಳಿಗಾಗುವ ಉಪದ್ರವಗಳು ನಿಮಗೆ ಸಂಭವಿಸುವುದಿಲ್ಲ.


“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು.


ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.


ಮೋಶೆಯು ಎದ್ದು ಕೋರಹ, ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು. ಇಸ್ರೇಲರ ಹಿರಿಯರೆಲ್ಲರೂ ಅವನನ್ನು ಹಿಂಬಾಲಿಸಿದರು.


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು