ಅರಣ್ಯಕಾಂಡ 16:27 - ಪರಿಶುದ್ದ ಬೈಬಲ್27 ಆದ್ದರಿಂದ ಜನರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರಗಳನ್ನು ಬಿಟ್ಟು ದೂರಹೋದರು. ದಾತಾನ್ ಮತ್ತು ಅಬೀರಾಮ್ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಪ್ರವೇಶದ್ವಾರದ ಬಳಿ ತಮ್ಮ ಹೆಂಡತಿಯರೊಡನೆ, ಮಕ್ಕಳೊಡನೆ ಮತ್ತು ಕೂಸುಗಳೊಡನೆ ನಿಂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದಕಾರಣ ಅವರೆಲ್ಲ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ಬೇರೆಹೋದರು. ದಾತಾನ್, ಅಬೀರಾಮ ಮತ್ತು ಅವರ ಮಡದಿ ಮಕ್ಕಳು, ಬಂಧುಬಳಗದವರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದಕಾರಣ ಅವರೆಲ್ಲರೂ ಕೋರಹ ದಾತಾನ್ ಅಬೀರಾಮರ ಗುಡಾರದ ಸುತ್ತಲಿರದೆ ಬೇರೆ ಹೋದರು. ದಾತಾನ್ ಅಬೀರಾಮರೂ ಅವರ ಹೆಂಡರೂ ಮಕ್ಕಳೂ ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಲುಗಳಲ್ಲಿ ನಿಂತು ಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಅವರು ಕೋರಹನ ದಾತಾನ್, ಅಬೀರಾಮರ ಡೇರೆಗಳ ಸುತ್ತಲಿಂದ ದೂರ ಹೋದರು. ದಾತಾನನೂ, ಅಬೀರಾಮನೂ ತಮ್ಮ ಹೆಂಡತಿಯರೂ, ಪುತ್ರರೂ, ಚಿಕ್ಕ ಮಕ್ಕಳೂ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿ |