ಅರಣ್ಯಕಾಂಡ 16:28 - ಪರಿಶುದ್ದ ಬೈಬಲ್28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ಮೋಶೆ ಜನರಿಗೆ - ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಇವುಗಳನ್ನು ನಡಿಸುವದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳುಕೊಳ್ಳುವದು ಹೇಗಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.