Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:3 - ಪರಿಶುದ್ದ ಬೈಬಲ್‌

3 ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಆರೋನರ ಬಳಿಗೆ ಬಂದು ಅವರಿಗೆ - ನಿವ್ಮಿುಂದ ಸಾಕಾಯಿತು; ಈ ಸಮೂಹದವರಲ್ಲಿ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ; ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನಲ್ಲವೇ; ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವದೇನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:3
20 ತಿಳಿವುಗಳ ಹೋಲಿಕೆ  

ಅವರು ಮೋಶೆಯ ಮೇಲೆಯೂ ಯೆಹೋವನ ಪವಿತ್ರ ಯಾಜಕನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.


ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೋ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


“ಆದರೆ ಮೋಶೆಗೆ ವಿಧೇಯರಾಗಲು ನಮ್ಮ ಪಿತೃಗಳಿಗೆ ಇಷ್ಟವಿರಲಿಲ್ಲ. ಅವರು ಅವನನ್ನು ತಿರಸ್ಕರಿಸಿ, ಈಜಿಪ್ಟಿಗೆ ಹಿಂತಿರುಗಬೇಕೆಂದಿದ್ದರು.


ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.


ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.


ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”


ನೀನು ಮತ್ತು ನಿನ್ನ ಹಿಂಬಾಲಕರು ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋನನಿಗೆ ವಿರೋಧವಾಗಿ ಗುಣುಗುಟ್ಟುವುದೇಕೆ?” ಎಂದು ಹೇಳಿದನು.


ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು. ನಾನೇ ಅವರ ಪಾಳೆಯದಲ್ಲಿ ವಾಸಮಾಡುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”


ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣುಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.


ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ. ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ. ಯೆಹೋವನೇ ಅವರ ದೇವರು. ಆತನು ಅವರೊಂದಿಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು