Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:33 - ಪರಿಶುದ್ದ ಬೈಬಲ್‌

33 ಆ ಜನರೆಲ್ಲಾ ಸಜೀವ ಸಮಾಧಿಯಾದರು. ಅವರ ಆಸ್ತಿಪಾಸ್ತಿಯೆಲ್ಲಾ ಅವರೊಡನೆ ಭೂಸಮಾಧಿಯಾಯಿತು. ಆ ಬಳಿಕ ಭೂಮಿ ಅವರ ಸಮೇತವಾಗಿ ಮುಚ್ಚಿಕೊಂಡಿತು. ಅದೇ ಅವರ ಅಂತ್ಯವಾಯಿತು. ಅವರು ಸಮುದಾಯದಿಂದ ಶಾಶ್ವತವಾಗಿ ಇಲ್ಲವಾದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ಸಜೀವರಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಇಳಿದುಬಿಟ್ಟರು. ಭೂಮಿ ಅವರನ್ನು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಸಜೀವಿಗಳಾಗಿ ತಮ್ಮ ಸರ್ವಸ್ವವು ಸಹಿತ ಪಾತಾಳಕ್ಕೆ ಹೋಗಿಬಿಟ್ಟರು; ಭೂವಿುಯು ಅವರನ್ನು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:33
19 ತಿಳಿವುಗಳ ಹೋಲಿಕೆ  

ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


“ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಬಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ.


“ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು.


ಆದರೆ ಅದು ಸಂಭವಿಸಲಿಲ್ಲ. ನೀನು ಆಕಾಶಕ್ಕೆ ದೇವರೊಂದಿಗೆ ಹೋಗಲಿಲ್ಲ. ನೀನು ಆಳವಾದ ಗುಂಡಿಗೆ ದಬ್ಬಲ್ಪಟ್ಟೆ. ಮರಣಸ್ಥಳವಾಗಿರುವ ಪಾತಾಳಕ್ಕೆ ನೀನು ದಬ್ಬಲ್ಪಟ್ಟೆ.


ನೀನು ಬರುವದರಿಂದ ಮರಣದ ಸ್ಥಳವಾಗಿರುವ ನರಕವು ಉತ್ಸಾಹಗೊಂಡಿದೆ. ನಿನ್ನನ್ನು ಎದುರುಗೊಳ್ಳುವದಕ್ಕಾಗಿ ಪಾತಾಳವು ಲೋಕದ ಎಲ್ಲಾ ಅಧಿಪತಿಗಳ ಆತ್ಮಗಳನ್ನು ಎಬ್ಬಿಸಿದೆ. ಅರಸರು ತಮ್ಮ ಸಿಂಹಾಸನದಲ್ಲಿ ನಿಂತುಕೊಳ್ಳುವಂತೆ ಪಾತಾಳವು ಮಾಡುತ್ತಿದೆ. ಅವರು ನಿನ್ನ ಬರುವಿಕೆಯನ್ನು ಕಾಯುತ್ತಿದ್ದಾರೆ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.


ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.


ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತೊ ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು.


ನಾಶವಾಗುತ್ತಿರುವ ಜನರ ಗೋಳಾಟವನ್ನು ಕೇಳಿದ ಇಸ್ರೇಲ್ ಜನರು, “ಭೂಮಿಯು ನಮ್ಮನ್ನೂ ನುಂಗಿಬಿಡುತ್ತದೆ!” ಎಂದುಕೊಂಡು ನಾನಾ ದಿಕ್ಕುಗಳಿಗೆ ಓಡಿಹೋದರು.


ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.


ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.


ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ. ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.


“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”


ಆ ಕತ್ತೆ ನನ್ನನ್ನು ನೋಡಿ ಮೂರು ಸಲ ನನ್ನೆದುರಿನಿಂದ ಇನ್ನೊಂದು ಕಡೆಗೆ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದಲ್ಲಿ ನಾನು ಕತ್ತೆಯನ್ನು ಉಳಿಸಿ ನಿನ್ನನ್ನು ಆಗಲೇ ಕೊಂದುಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.


ನಾನು ಸಹಾಯಕ್ಕಾಗಿ ದೇವರಲ್ಲಿ ಮೊರೆಯಿಡುವೆನು. ಯೆಹೋವನು ನನಗೆ ಉತ್ತರ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು