ಅರಣ್ಯಕಾಂಡ 16:34 - ಪರಿಶುದ್ದ ಬೈಬಲ್34 ನಾಶವಾಗುತ್ತಿರುವ ಜನರ ಗೋಳಾಟವನ್ನು ಕೇಳಿದ ಇಸ್ರೇಲ್ ಜನರು, “ಭೂಮಿಯು ನಮ್ಮನ್ನೂ ನುಂಗಿಬಿಡುತ್ತದೆ!” ಎಂದುಕೊಂಡು ನಾನಾ ದಿಕ್ಕುಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಹೀಗೆ ಅವರು ಸಮುದಾಯದಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಯೇಲರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ, “ಭೂಮಿ ನಮ್ಮನ್ನು ನುಂಗದಿರಲಿ” ಎಂದುಕೊಂಡು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ - ಭೂವಿುಯು ನಮ್ಮನ್ನೂ ನುಂಗೀತೆಂದು ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಓಡಿಹೋದರು, ಏಕೆಂದರೆ ಅವರು, “ಭೂಮಿಯು ನಮ್ಮನ್ನು ಸಹ ನುಂಗಿಬಿಟ್ಟೀತು,” ಎಂದು ಹೆದರಿದರು. ಅಧ್ಯಾಯವನ್ನು ನೋಡಿ |