Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:35 - ಪರಿಶುದ್ದ ಬೈಬಲ್‌

35 ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:35
14 ತಿಳಿವುಗಳ ಹೋಲಿಕೆ  

ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು.


ಆದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.


ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಧೂಪಾರತಿಯನ್ನು ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನೂ ಆರೋನನೂ ನಿಮ್ಮನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.


ಈ ನಾಲ್ಕು ಮಂದಿ ಇಸ್ರೇಲರು ಇನ್ನಿತರ ಇನ್ನೂರೈವತ್ತು ಗಂಡಸರೊಂದಿಗೆ ಮೋಶೆಗೆ ವಿರುದ್ಧವಾಗಿ ಎದ್ದರು. ಅವರು ಜನರಿಂದ ಆರಿಸಲ್ಪಟ್ಟ ನಾಯಕರಾಗಿದ್ದುದರಿಂದ ಜನರೆಲ್ಲರೂ ಅವರನ್ನು ಬಲ್ಲವರಾಗಿದ್ದರು.


ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.


ನಾಶವಾಗುತ್ತಿರುವ ಜನರ ಗೋಳಾಟವನ್ನು ಕೇಳಿದ ಇಸ್ರೇಲ್ ಜನರು, “ಭೂಮಿಯು ನಮ್ಮನ್ನೂ ನುಂಗಿಬಿಡುತ್ತದೆ!” ಎಂದುಕೊಂಡು ನಾನಾ ದಿಕ್ಕುಗಳಿಗೆ ಓಡಿಹೋದರು.


ಕೋರಹನೂ ಸೇರಿದಂತೆ ಆ ಕಾಯಿಲೆಯಿಂದ ಸತ್ತವರು ಹದಿನಾಲ್ಕು ಸಾವಿರದ ಏಳುನೂರು ಮಂದಿ.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.


ಆದರೆ ನಾದಾಬ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಯೆಹೋವನಿಗೆ ಧೂಪವನ್ನು ಸಮರ್ಪಿಸುವಾಗ ಯೆಹೋವನು ಅಪ್ಪಣೆ ಕೊಡದೆ ಇದ್ದ ಬೆಂಕಿಯನ್ನು ಉಪಯೋಗಿಸಿದರು. ಆದ್ದರಿಂದ ನಾದಾಬ ಮತ್ತು ಅಬೀಹೂ ಅಲ್ಲಿ ಸತ್ತರು. ಅವರಿಗೆ ಗಂಡುಮಕ್ಕಳಿಲ್ಲದ್ದರಿಂದ ಎಲ್ಲಾಜಾರನು ಮತ್ತು ಈತಾಮಾರನು ಅವರ ತಂದೆಯಾದ ಆರೋನನ ಕೈಕೆಳಗೆ ಯೆಹೋವನ ಸೇವೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು