Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:45 - ಪರಿಶುದ್ದ ಬೈಬಲ್‌

45 “ಆ ಜನರಿಂದ ನೀವಿಬ್ಬರೂ ದೂರಹೋಗಿರಿ. ನಾನು ಈಗ ಅವರನ್ನು ನಾಶಮಾಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಆರೋನರು ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 “ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:45
8 ತಿಳಿವುಗಳ ಹೋಲಿಕೆ  

“ಜನರಿಗೆ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಮುತ್ತಲಿಂದ ದೂರಹೋಗಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.


ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.


ಮೋಶೆಯು ಜನರನ್ನು ಎಚ್ಚರಿಸಿ, “ಈ ಕೆಟ್ಟ ಜನರ ಗುಡಾರಗಳಿಂದ ಹೊರಟುಹೋಗಿರಿ. ಇವರ ಸ್ವತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು. ಇಲ್ಲವಾದರೆ ಅವರ ಪಾಪಗಳ ದೆಸೆಯಿಂದ ನೀವೂ ನಾಶವಾಗುವಿರಿ” ಎಂದು ಹೇಳಿದನು.


ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು