Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:47 - ಪರಿಶುದ್ದ ಬೈಬಲ್‌

47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋದಾಗ, ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದ್ದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಮೋಶೆ ಹೇಳಿದಂತೆಯೇ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮುದಾಯದವರ ಬಳಿಗೆ ಓಡಿಬಂದಾಗ ಆ ಘೋರವ್ಯಾಧಿ ಜನರಲ್ಲಿ ಹರಡಿಕೊಳ್ಳುತ್ತಲಿತ್ತು. ಅವನು ಧೂಪಹಾಕಿ ಆ ಜನರ ಪರವಾಗಿ ದೋಷಪರಿಹಾರ ಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:47
9 ತಿಳಿವುಗಳ ಹೋಲಿಕೆ  

ಕೆಟ್ಟತನವು ನಿಮ್ಮನ್ನು ಸೋಲಿಸುವುದಕ್ಕೆ ಅವಕಾಶಕೊಡದೆ ಒಳ್ಳೆಯದನ್ನು ಮಾಡುವುದರ ಮೂಲಕವಾಗಿ ಕೆಟ್ಟತನವನ್ನು ಸೋಲಿಸಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.


ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು.


ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ಅವನು ಸತ್ತವರಿಗೂ ಬದುಕಿರುವವರಿಗೂ ನಡುವೆ ನಿಂತುಕೊಂಡನು. ಆಗ ಕಾಯಿಲೆ ನಿಂತುಹೋಯಿತು.


ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು