ಅರಣ್ಯಕಾಂಡ 16:5 - ಪರಿಶುದ್ದ ಬೈಬಲ್5 ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ: ಅಧ್ಯಾಯವನ್ನು ನೋಡಿ |
ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”