ಅರಣ್ಯಕಾಂಡ 17:6 - ಪರಿಶುದ್ದ ಬೈಬಲ್6 ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದರಂತೆಯೇ ಮೋಶೆ ಇಸ್ರಯೇಲರೊಡನೆ ಮಾತಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದರಂತೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲ್ಯರ ಸಂಗಡ ಮಾತಾಡಲಾಗಿ ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು; ಅವುಗಳೊಡನೆ ಆರೋನನ ಕೋಲೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು. ಅಧ್ಯಾಯವನ್ನು ನೋಡಿ |