ಅರಣ್ಯಕಾಂಡ 17:8 - ಪರಿಶುದ್ದ ಬೈಬಲ್8 ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾರನೆಯ ದಿನ ಮೋಶೆ ಗುಡಾರದೊಳಗೆ ಹೋಗಿ ನೋಡಿದನು. ಏನಾಶ್ಚರ್ಯ! ಲೇವಿಕುಲದ ಪರವಾಗಿ ಆರೋನನು ಕೊಟ್ಟಿದ್ದ ಕೋಲು ಚಿಗುರಿತ್ತು; ಮೊಗ್ಗುಗಳು ಬಿಟ್ಟು, ಹೂವರಳಿ, ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮರುದಿನ ಮೋಶೆ ಗುಡಾರದಲ್ಲಿ ಹೋಗಿ ನೋಡಲಾಗಿ ಆಹಾ, ಲೇವಿಕುಲಕ್ಕೋಸ್ಕರ ಆರೋನನು ಕೊಟ್ಟಿದ್ದ ಕೋಲು ಚಿಗುರಿ ಮೊಗ್ಗೆ ಬಿಟ್ಟು ಹೂವರಳಿ ಬಾದಾವಿು ಹಣ್ಣುಗಳನ್ನು ಫಲಿಸಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.