Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:1 - ಪರಿಶುದ್ದ ಬೈಬಲ್‌

1 ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ಕುಲದವರೆಲ್ಲರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೆಹೋವನು ಆರೋನನಿಗೆ - ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ ನಿನ್ನ ಸಂತತಿಯವರೂ ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:1
22 ತಿಳಿವುಗಳ ಹೋಲಿಕೆ  

ಆರೋನನು ಇದನ್ನು ತನ್ನ ಹಣೆಯ ಮೇಲೆ ಧರಿಸಿಕೊಳ್ಳುವನು. ಹೀಗೆ, ಇಸ್ರೇಲರು ಅರ್ಪಿಸಿದ ಕಾಣಿಕೆಗಳಲ್ಲಿ ದೋಷವೇನಾದರೂ ಇದ್ದರೆ ಅವನು ಅದನ್ನು ತನ್ನ ಮೇಲೆ ತೆಗೆದುಕೊಂಡು ತಾನೇ ಅದನ್ನು ವಹಿಸಿಕೊಳ್ಳುವನು. ಇವು ಜನರು ಯೆಹೋವನಿಗೆ ಸಮರ್ಪಿಸುವ ಕಾಣಿಕೆಗಳಾಗಿವೆ. ಜನರ ಕಾಣಿಕೆಗಳನ್ನು ಯೆಹೋವನು ಅಂಗೀಕರಿಸುವಂತೆ ಆರೋನನು ಇದನ್ನು ಯಾವಾಗಲೂ ತನ್ನ ಶಿರದಲ್ಲಿ ಧರಿಸಿಕೊಂಡಿರುವನು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಲ್ಲಾ, ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು.


ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು.


ಲೇವಿ ಕುಲದ ಕೋಲಿನ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’


“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.


ಮೋಶೆ, “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು.


ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”


“ಲೇವಿ ಕುಲದವರನ್ನು ಯಾಜಕನಾದ ಆರೋನನ ಬಳಿಗೆ ಕರೆದುಕೊಂಡು ಬಾ. ಅವರು ಆರೋನನಿಗೆ ಸಹಾಯಕರಾಗಿರುವರು.


ಈ ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ.


“ಅದಲ್ಲದೆ, ಅವರ ಪ್ರತಿಷ್ಠಿತಾ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು.


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


ಮೀಕನು ಅವನನ್ನು ತಮಗೆ ಯಾಜಕನಾಗಬೇಕೆಂದು ಕೇಳಿಕೊಂಡನು. ಆದ್ದರಿಂದ ಆ ತರುಣನು ಯಾಜಕನಾಗಿ ಮೀಕನ ಮನೆಯಲ್ಲಿಯೇ ವಾಸಮಾಡಿದನು.


“ಆಮೇಲೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿಕೊಂಡು ಇಸ್ರೇಲ್ ಜನರ ದೋಷವನ್ನು ನಿನ್ನ ಎಡಮಗ್ಗುಲ ಮೇಲೆ ಹಾಕು. ನೀನು ನಿನ್ನ ಎಡಮಗ್ಗುಲಲ್ಲಿ ಮಲಗಿರುವಷ್ಟು ದಿನ ಇಸ್ರೇಲರ ದೋಷಗಳನ್ನು ಹೊತ್ತುಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು