ಅರಣ್ಯಕಾಂಡ 18:11 - ಪರಿಶುದ್ದ ಬೈಬಲ್11 “ಅದಲ್ಲದೆ, ಅವರ ಪ್ರತಿಷ್ಠಿತಾ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಇದಲ್ಲದೆ ಇಸ್ರಯೇಲರು ನನಗೆ ಮೀಸಲಾಗಿಟ್ಟು ಅರ್ಪಿಸುವ ದ್ರವ್ಯಗಳು, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸಲ್ಲಬೇಕು. ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿ ಶುದ್ಧರಾದವರೆಲ್ಲರೂ ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದಲ್ಲದೆ ಇಸ್ರಾಯೇಲ್ಯರು [ಮಾಡುವ ಸಮಾಧಾನಯಜ್ಞದ್ರವ್ಯಗಳಿಂದ] ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಆಗಬೇಕು; ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ನಿಯಮದಿಂದ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿ |
“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.