ಅರಣ್ಯಕಾಂಡ 18:15 - ಪರಿಶುದ್ದ ಬೈಬಲ್15 “ಮನುಷ್ಯರಲ್ಲಾಗಲಿ ಪ್ರಾಣಿಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಮನುಷ್ಯರಲ್ಲೇ ಆಗಲಿ, ಪಶುಗಳಲ್ಲೇ ಆಗಲಿ, ಅವರು ನನಗೆ ಸಮರ್ಪಿಸುವ ಸಕಲ ಪ್ರಾಣಿಗಳಲ್ಲಿ ಚೊಚ್ಚಲಿನದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲುಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. ಅಧ್ಯಾಯವನ್ನು ನೋಡಿ |
ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು!”
ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ.