Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:17 - ಪರಿಶುದ್ದ ಬೈಬಲ್‌

17 “ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹಸುವಿನ ಮತ್ತು ಆಡುಕುರಿಗಳ ಚೊಚ್ಚಲು ಮರಿಗಳನ್ನು ಬಿಡಕೂಡದು. ಅವು ದೇವರ ಸೊತ್ತು. ಆದ್ದರಿಂದ ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸು; ಅವುಗಳ ಕೊಬ್ಬನ್ನು ಬಲಿಕಾಣಿಕೆಯಾಗಿ ದಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವದರಿಂದ ಅವುಗಳನ್ನು ಬಿಡಕೂಡದು; ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:17
5 ತಿಳಿವುಗಳ ಹೋಲಿಕೆ  

ಆ ಟಗರನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


ಬಳಿಕ ಯಾಜಕನು ಆ ಪಶುಗಳ ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಒಂದು ತಿಂಗಳಿನ ಪ್ರಾಯಕ್ಕೆ ಬಂದಿರುವ ಎಲ್ಲರಿಂದಲೂ ನಿಗದಿಪಡಿಸಿದ ಐದು ಶೆಕೆಲ್‌ಗಳನ್ನು ಈಡಾಗಿ ತೆಗೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು