Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:2 - ಪರಿಶುದ್ದ ಬೈಬಲ್‌

2 ನಿನ್ನ ತಂದೆಯ ಕುಲದವರೂ ನಿನ್ನ ರಕ್ತಸಂಬಂಧಿಗಳೂ ಆಗಿರುವ ಲೇವಿಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡುಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:2
16 ತಿಳಿವುಗಳ ಹೋಲಿಕೆ  

ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.


ಅವರು ದೇವದರ್ಶನಗುಡಾರವನ್ನು ಕಾಯಬೇಕು ಮತ್ತು ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಬೇಕು. ಬೇರೆ ಯಾರೂ ನಿನ್ನೊಂದಿಗೆ ಭಾಗಿಗಳಾಗಿರಬಾರದು.


ಮೋಶೆ ಆ ಕೋಲುಗಳನ್ನು ಒಡಂಬಡಿಕೆಯ ಗುಡಾರದಲ್ಲಿ ಯೆಹೋವನ ಮುಂದೆ ಇಟ್ಟನು.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು.


ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸ ಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯ ಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀ ಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ನಾನು ನಿಮಗೆ ವಿವರಿಸಿದಂತೆಯೇ ಗುಡಾರದಲ್ಲಿ ಎಲ್ಲವನ್ನೂ ಸಿದ್ಧಮಾಡಲಾಗಿತ್ತು. ಯಾಜಕರು ಪ್ರತಿದಿನವೂ ತಮ್ಮ ಆರಾಧನೆಯ ಕರ್ತವ್ಯಗಳನ್ನು ಮಾಡಲು ಮೊದಲನೆ ಕೊಠಡಿಯ ಒಳಗಡೆ ಹೋಗುತ್ತಿದ್ದರು.


ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.


ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು