Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:20 - ಪರಿಶುದ್ದ ಬೈಬಲ್‌

20 ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ ಸರ್ವೇಶ್ವರ ಆರೋನನಿಗೆ ಹೀಗೆಂದರು: “ಇಸ್ರಯೇಲರ ನಾಡಿನಲ್ಲಿ ನಿನ್ನ ಸ್ವಂತ ಸೊತ್ತಾಗಿ ಯಾವ ಆಸ್ತಿಯೂ ಇರುವುದಿಲ್ಲ; ಅವರೊಂದಿಗೆ ನಿನಗೆ ಯಾವ ಪಾಲೂ ಇರುವುದಿಲ್ಲ. ಇಸ್ರಯೇಲರ ನಡುವೆ ನಾನೇ ನಿನಗೆ ಆಸ್ತಿಪಾಸ್ತಿ, ಪಾಲುಪಸುಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರ ದೇಶದಲ್ಲಿ ನಿನಗೆ ಸ್ವಂತಕ್ಕಾಗಿ ಭೂಸ್ಥಿತಿ ಆಗುವದಿಲ್ಲ; ಅವರೊಂದಿಗೆ ನಿನಗೆ ಪಾಲು ಇರುವದಿಲ್ಲ. ಇಸ್ರಾಯೇಲ್ಯರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಸ್ವಾಸ್ತ್ಯವಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:20
20 ತಿಳಿವುಗಳ ಹೋಲಿಕೆ  

“ಲೇವಿಯರ ಆಸ್ತಿಯು ನಾನೇ, ಇಸ್ರೇಲರೊಳಗೆ ಅವರಿಗೆ ಯಾವ ಆಸ್ತಿಯೂ ಇರುವದಿಲ್ಲ. ನಾನೇ ಅವರ ಸ್ವಾಸ್ತ್ಯ.


ಹೀಗಿದ್ದುದರಿಂದ ಅವರಿಗೆ ತಮ್ಮ ಸಹೋದರರ ಜೊತೆಯಲ್ಲಿ ವಾಗ್ದಾನದ ದೇಶದೊಳಗೆ ಸ್ವಾಸ್ತ್ಯವು ದೊರಕಲಿಲ್ಲ. ಅವರ ಸ್ವಾಸ್ತ್ಯವು ಯೆಹೋವನೇ ಆಗಿದ್ದನು. ಇದು ದೇವರಾದ ಯೆಹೋವನ ವಾಗ್ದಾನ.)


ಮೋಶೆಯು ಲೇವಿಕುಲದವರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಇಸ್ರೇಲಿನ ದೇವರಾದ ಯೆಹೋವನು ಲೇವಿಯ ಕುಲದವರಿಗೆ ವಾಗ್ದಾನ ಮಾಡಿದಂತೆ ಆತನೇ ಅವರಿಗೆ ಸ್ವಾಸ್ತ್ಯವಾಗಿದ್ದನು.


ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು; ಆದ್ದರಿಂದ ನಾನು ಆತನಲ್ಲಿ ಭರವಸವಿಡುವೆನು” ಎಂದುಕೊಳ್ಳುವೆನು.


ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ.


ನಿಮ್ಮ ಊರಲ್ಲಿ ನೆಲೆಸಿರುವ ಲೇವಿಯರನ್ನು ಮರೆಯಬೇಡಿರಿ. ನಿಮ್ಮ ಆಹಾರದಲ್ಲಿ ಅವರಿಗೂ ಪಾಲುಕೊಡಿರಿ. ಯಾಕೆಂದರೆ ಅವರಿಗೆ ದೇಶದಲ್ಲಿ ನಿಮ್ಮ ಹಾಗೆ ಸ್ವಾಸ್ತ್ಯ ದೊರಕುವುದಿಲ್ಲ.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.


ಆದ್ದರಿಂದ ಯೆಹೋವನನ್ನು ಕೂಗಿಕೊಳ್ಳುವೆನು. ನನ್ನ ಆಶ್ರಯಸ್ಥಾನವೂ ನೀನೇ, ನನ್ನನ್ನು ಬದುಕಿಸಬಲ್ಲಾತನೂ ನೀನೇ ಎಂದು ಆತನಿಗೆ ಮೊರೆಯಿಡುವೆನು.


ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.


ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.


ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


ಲೇವಿ ಕುಟುಂಬಗಳಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸಾದ ಪುರುಷರ ಒಟ್ಟು ಸಂಖ್ಯೆ 23,000. ಆದರೆ ಈ ಜನರು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ. ಯೆಹೋವನು ಬೇರೆ ಇಸ್ರೇಲರಿಗೆ ಕೊಟ್ಟ ಸ್ವಾಸ್ತ್ಯದಲ್ಲಿ ಅವರಿಗೆ ಪಾಲು ಸಿಕ್ಕಲಿಲ್ಲ.


ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು