ಅರಣ್ಯಕಾಂಡ 18:22 - ಪರಿಶುದ್ದ ಬೈಬಲ್22 ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರಕೂಡದು; ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇನ್ನು ಮುಂದೆ ಇಸ್ರಯೇಲರು ಪಾಪಮಾಡಿ ಸಾವಿಗೆ ತುತ್ತಾಗದಂತೆ ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇನ್ನು ಮುಂದೆ ಇಸ್ರಾಯೇಲ್ಯರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು; ಬಂದರೆ ಅವರು ಆ ದೋಷದಿಂದ ಸತ್ತುಹೋದಾರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು. ಅಧ್ಯಾಯವನ್ನು ನೋಡಿ |
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”