Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:23 - ಪರಿಶುದ್ದ ಬೈಬಲ್‌

23 ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:23
10 ತಿಳಿವುಗಳ ಹೋಲಿಕೆ  

ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು.


ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ.


ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ಕುಲದವರೆಲ್ಲರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


ಲೇವಿ ಕುಟುಂಬಗಳಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸಾದ ಪುರುಷರ ಒಟ್ಟು ಸಂಖ್ಯೆ 23,000. ಆದರೆ ಈ ಜನರು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ. ಯೆಹೋವನು ಬೇರೆ ಇಸ್ರೇಲರಿಗೆ ಕೊಟ್ಟ ಸ್ವಾಸ್ತ್ಯದಲ್ಲಿ ಅವರಿಗೆ ಪಾಲು ಸಿಕ್ಕಲಿಲ್ಲ.


ಗತಕಾಲದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟುಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು.


ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಮತ್ತು ಆ ನೀರನ್ನು ಯಾವನಾದರೂ ಮುಟ್ಟಿದರೆ, ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು.


ಹೀಗಿದ್ದುದರಿಂದ ಅವರಿಗೆ ತಮ್ಮ ಸಹೋದರರ ಜೊತೆಯಲ್ಲಿ ವಾಗ್ದಾನದ ದೇಶದೊಳಗೆ ಸ್ವಾಸ್ತ್ಯವು ದೊರಕಲಿಲ್ಲ. ಅವರ ಸ್ವಾಸ್ತ್ಯವು ಯೆಹೋವನೇ ಆಗಿದ್ದನು. ಇದು ದೇವರಾದ ಯೆಹೋವನ ವಾಗ್ದಾನ.)


ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು