ಅರಣ್ಯಕಾಂಡ 18:26 - ಪರಿಶುದ್ದ ಬೈಬಲ್26 “ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಲೇವಿಯರಿಗೆ ನೀನು ಇಂತೆಂದು ಆಜ್ಞಾಪಿಸು - ‘ನಿಮ್ಮ ಸ್ವಂತಕ್ಕಾಗಿ ನಾನು ಗೊತ್ತುಮಾಡಿರುವ ಹತ್ತನೆಯ ಒಂದು ಪಾಲನ್ನು ಇಸ್ರಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಒಂದು ಪಾಲನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ಸ್ವಂತಕ್ಕಾಗಿ ನಾನು ನೇವಿುಸಿರುವ ಹತ್ತನೆಯ ಪಾಲನ್ನು ನೀವು ಇಸ್ರಾಯೇಲ್ಯರಿಂದ ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಪಾಲನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”