ಅರಣ್ಯಕಾಂಡ 18:3 - ಪರಿಶುದ್ದ ಬೈಬಲ್3 ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಲೇವಿಯರು ನಿನ್ನ ಅಪ್ಪಣೆಯ ಮೇರೆಗೆ ನಡೆದು ಗುಡಾರವನ್ನೆಲ್ಲಾ ಕಾಯಬೇಕು; ಆದರೆ ಪವಿತ್ರಸ್ಥಾನದ ಸಾಮಾನಿನ ಹತ್ತಿರವಾಗಲಿ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವನು ಸಾಯುವದು ಮಾತ್ರವಲ್ಲದೆ ನೀವೂ ಸತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ. ಅಧ್ಯಾಯವನ್ನು ನೋಡಿ |
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”