ಅರಣ್ಯಕಾಂಡ 18:4 - ಪರಿಶುದ್ದ ಬೈಬಲ್4 ಅವರು ದೇವದರ್ಶನಗುಡಾರವನ್ನು ಕಾಯಬೇಕು ಮತ್ತು ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಬೇಕು. ಬೇರೆ ಯಾರೂ ನಿನ್ನೊಂದಿಗೆ ಭಾಗಿಗಳಾಗಿರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ನಿಮ್ಮ ಜೊತೆ ಸೇರಿ ದೇವದರ್ಶನದ ಗುಡಾರವನ್ನು ನೋಡಿಕೊಳ್ಳಲಿ; ಅದರ ಎಲ್ಲ ಪರಿಚರ್ಯವನ್ನು ಮಾಡಲಿ. ಇತರ ಕುಲದವರ ಜೊತೆ ನಿಮಗೆ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಪರಿಚರ್ಯವನ್ನು ಮಾಡಬೇಕು; ಇತರ ಕುಲದವರು ನಿಮ್ಮ ಜೊತೆಯಲ್ಲಿರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು. ಅಧ್ಯಾಯವನ್ನು ನೋಡಿ |